ಬೆಂಗಳೂರು, ಡಿ.15(DaijiworldNews/AA): ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ತಮ್ಮ ಮದುವೆ ಕಾರ್ಡ್ ವಿತರಣೆ ಆರಂಭಿಸಿದ್ದಾರೆ. ಆಮಂತ್ರಣ ಪತ್ರಿಕೆಯ ಪೂಜೆಯ ಬಳಿಕ ಆಮಂತ್ರಣ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನೀಡಿದ್ದಾರೆ.



ಡಾಲಿ ಧನಂಜಯ್ ಕೆಲವು ದಿನಗಳ ಹಿಂದಷ್ಟೆ ವೈದ್ಯೆ ಧನ್ಯತಾ ಅವರೊಂದಿಗೆ ಹಾಸನದ ತಮ್ಮ ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರ ಮದುವೆ ಆಮಂತ್ರಣ ಪತ್ರಿಕೆಯ ಪೂಜೆ ನೆರವೇರಿದ್ದು, ಮೊದಲ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಆ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಈ ಜೋಡಿ ಅವರಿಗೂ ಕೂಡ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.
ಕುಮಾರಸ್ವಾಮಿ ಅವರಿಗೂ ಈ ಜೋಡಿ ಆಹ್ವಾನ ಪತ್ರಿಕೆಯನ್ನು ನೀಡಲಿದ್ದಾರೆ. ಆದರೆ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿರುವ ಕಾರಣ ಅವರು ಮರಳಿ ಬಂದ ಬಳಿಕ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಲಿದ್ದಾರೆ.
ಡಾಲಿ ಧನಂಜಯ್ ಮತ್ತು ಧನ್ಯತಾ ಅವರ ವಿವಾಹವು ಫೆಬ್ರವರಿ 15 ಮತ್ತು 16 ರಂದು ಮೈಸೂರಿನ ಅರಮನೆ ಎದುರು ವಸ್ತು ಸಂಗ್ರಹಾಲಯ ಮೈದಾನದಲ್ಲಿ ಅದ್ಧೂರಿಯಾಗಿ ನೆರವೇರಲಿದೆ.