ಮುಂಬೈ, ಜ.15(DaijiworldNews/AK): ನಟಿ ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಜನವರಿ 17ರಂದು ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ 70ರ ದಶಕದ ಕಥೆ ಹೊಂದಿದೆ.

1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ ತುರ್ತುಪರಿಸ್ಥಿತಿ ಕುರಿತು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಚಿತ್ರಕ್ಕೆ ಬ್ಯಾನ್ ಬಿಸಿ ತಟ್ಟಿದೆ. ಇದು ಚಿತ್ರಕ್ಕೆ ಕೊಂಚ ಹಿನ್ನಡೆ ತರಬಹುದು ಎನ್ನಲಾಗುತ್ತಿದೆ.
‘ಎಮರ್ಜೆನ್ಸಿ’ ಸಿನಿಮಾ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, ರಿಲೀಸ್ ವಿಳಂಬ ಆಯಿತು. ಸೆನ್ಸಾರ್ ಮಂಡಳಿಯವರು ಈ ಚಿತ್ರಕ್ಕೆ ಸರ್ಟಿಫಿಕೇಟ್ ನೀಡೋಕೆ ವಿಳಂಬ ಮಾಡಿದರು. . ಕೊನೆಗೆ ಬದಲಾವಣೆಗೆ ಒಪ್ಪಿಕೊಂಡ ಬಳಿಕ ಅವರಿಗೆ ಸರ್ಟಿಫಿಕೇಟ್ ನೀಡಲಾಯಿತು. ಈ ಸಿನಿಮಾದಿಂದ ನಿರ್ಮಾಪಕಿ ಆಗಿ, ನಿರ್ದೇಶಕಿ ಆಗಿ ಕಂಗನಾ ಸುಸ್ತಾಗಿದ್ದಾರೆ. ಈಗ ಚಿತ್ರಕ್ಕೆ ಬಾಂಗ್ಲಾದೇಶದಲ್ಲಿ ಬ್ಯಾನ್ ಬಿಸಿ ತಟ್ಟಿದೆ.