ಬೆಂಗಳೂರು, ಜ.26 (DaijiworldNews/AA): ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ದಂಪತಿ ಮನೆಗೆ ಹೊಸ ಸದಸ್ಯನ ಆಗಮನ ಆಗಿದೆ. ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಸಿಂಹಪ್ರಿಯಾ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹರಿಪ್ರಿಯಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇನ್ನು ಈ ಖುಷಿಯ ವಿಚಾರವನ್ನು ವಸಿಷ್ಠ ಸಿಂಹ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, 'ನಮ್ಮ ಮದುವೆ ದಿನವೇ ಅವನು ಬಂದಿದ್ದಾನೆ' ಎಂದು ಅವರು ಪೋಸ್ಟ್ ಮಾಡಿದ್ದಾರೆ.
ತಮ್ಮ ವೆಡ್ಡಿಂಗ್ ಆ್ಯನಿವರ್ಸರಿ ದಿನವೇ ಹರಿಪ್ರಿಯಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇನ್ನು ಸಿಂಹಪ್ರಿಯಾ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.