ಬೆಂಗಳೂರು, ಮೇ. 11 (DaijiworldNews/TA): ಬಿಗ್ ಬಾಸ್ ಖ್ಯಾತಿಯ ರಂಜಿತ್ ಬಹುಕಾಲದ ಗೆಳತಿ ಮಾನಸ ಗೌಡ ಜೊತೆ ಅದ್ಧೂರಿಯಾಗಿ ಹಸೆಮಣೆ ಏರಿದ್ದಾರೆ.

ದೊಡ್ಡಬಳ್ಳಾಪುರದ ಮೇನ್ ರೋಡ್, ಹೊನ್ನೇನಹಳ್ಳಿಯಲ್ಲಿ ರಂಜಿತ್ ಮದುವೆ ಜರುಗಿದೆ. ಮಾನಸ ಜೊತೆಗಿನ ಹಲವು ವರ್ಷಗಳ ಪ್ರೀತಿಗೆ ಇಂದು ಮದುವೆಯ ಮುದ್ರೆ ಒತ್ತಿದ್ದಾರೆ.
ನವಜೋಡಿಗೆ ತುಕಾಲಿ ಸಂತೋಷ್ ಮತ್ತು ಮಾನಸಾ ದಂಪತಿ, ಗೋಲ್ಡ್ ಸುರೇಶ್, ಯಮುನಾ, ರಜತ್, ರಂಗಾಯಣ ರಘು, ಶೋಭರಾಜ್ ಸೇರಿದಂತೆ ಅನೇಕರು ಭಾಗಿಯಾಗಿ ಶುಭಹಾರೈಸಿದ್ದಾರೆ.