ಉಡುಪಿ, ಜು. 22 (DaijiworldNews/AA): ಜನಪ್ರಿಯ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ.




ರಾಜ್ ಬಿ. ಶೆಟ್ಟಿ ಅವರು ನೂತನವಾಗಿ ನಿರ್ಮಾಣಗೊಂಡಿರುವ ಮಾರಿಗುಡಿ ದೇಗುಲ ದರ್ಶನ ಮಾಡಿ, ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ವತಿಯಿಂದ ರಾಜ್ ಬಿ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಸದ್ಯ ತಮ್ಮ ಲಾಫಿಂಗ್ ಬುದ್ಧ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಸು ಫ್ರಂ ಸೋ ಸಿನಿಮಾ ಬಿಡುಗಡೆಯ ನಿರೀಕ್ಷೆಯಲ್ಲಿರುವ ರಾಜ್ ಶೆಟ್ಟಿ, ಸಿನಿಮಾ ಪ್ರಚಾರ ಸಲುವಾಗಿ ಕರಾವಳಿ ಪ್ರವಾಸದಲ್ಲಿದ್ದಾರೆ. ಅಭಿಮಾನಿಗಳೇ ಸಿನಿಮಾ ನೋಡಿ ರಿವ್ಯೂ ನೀಡುವಂತೆ, ಚಿತ್ರ ಪ್ರದರ್ಶನಕ್ಕೆ ಹೊಸ ಆಯಾಮ ನೀಡಿರುವ ರಾಜ್ ಶೆಟ್ಟಿ ಸದ್ಯ ಕನ್ನಡ ಹಾಗೂ ಮಾಯಾಳಂ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.