ಬೆಂಗಳೂರು,ಜು. 25 (DaijiworldNews/AK): ಓಂ ಸಾಯಿಪ್ರಕಾಶ್ ಅವರ ನಿರ್ದೇಶನ ಹಾಗೂ ನಿರ್ಮಾಣದ `ಸೆಪ್ಟೆಂಬರ್ 10′ ಚಿತ್ರವು ಬಿಡುಗಡೆಗೂ ಮೊದಲೇ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ.

ಎಲ್ಲಾ ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರವಲ್ಲ ಎಂಬ ಸಂದೇಶ ಹೊತ್ತು ತೆರೆಗೆ ಬರುತ್ತಿರುವ ಸೆಪ್ಟೆಂಬರ್ 10 ಚಲನಚಿತ್ರಕ್ಕೆ ಇದೀಗ ಯುನಿವರ್ಸಲ್ ಫಿಲಂ ಮೇಕರ್ಸ್ ಕೌನ್ಸಿಲ್ ಹಾಗೂ ಜೆನಸಿಸ್ ಅಲ್ಟಿಮಾ ದುಬೈನ ಸಹಯೋಗದೊಂದಿಗೆ ನಡೆಯುತ್ತಿರುವ ಹೈದರಾಬಾದ್ನ ಚಾರ್ ಮಿನಾರ್ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗಳಿಸಿದೆ.
ಹೈದರಾಬಾದ್ನ ಪ್ರಸಾದ್ ಫಿಲಂ ಲ್ಯಾಬ್ನಲ್ಲಿ ಜುಲೈ 26, 27ರಂದು ನಡೆಯುತ್ತಿರುವ ಕಾರ್ಯಕ್ರಮದಲ್ಲಿ ನಿರ್ದೇಶಕ ಹಾಗೂ ನಿರ್ಮಾಪಕ ಓಂ ಸಾಯಿಪ್ರಕಾಶ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ನಟಿ ಶ್ರೀರಕ್ಷಾ, ಶಿವಕುಮಾರ್ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜೆಜಿ.ಕೃಷ್ಣ ಚಿತ್ರದ ಛಾಯಾಗ್ರಾಹಕರು, ಮ್ಯೂಸಿಕ್ ಬಜಾರ್ ಈ ಚಿತ್ರದ ಹಾಡುಗಳನ್ನ ಹೊರತಂದಿದೆ.