ಬೆಂಗಳೂರು, ಆ.17 (Daijiworld News/AK): ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮಗೊಳಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.

ಇದೀಗ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ., ನಟ ವಿಷ್ಣುವರ್ಧನ್ ಅವರ ಫೋಟೋ ಹಂಚಿಕೊಂಡು ಅದರಲ್ಲಿ ಸಾಧಕನಿಗೆ ಸಾವಿಲ್ಲ, ಅಭಿಮಾನಿಗಳ ಹೃದಯವೇ ನಿಮಗೆ ಗುಡಿ ಎಂದು ಬರೆದುಕೊಂಡಿದ್ದಾರೆ.
ಇತ್ತೀಚಿಗೆ ನಟ ಅನಿರುದ್ಧ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸೋಕೆ ನಿಮ್ಮ ಜೊತೆ ನಾವಿದ್ದೇವೆ ಎಂದು ವಿಷ್ಣು ಅಭಿಮಾನಿಗಳ ಪರವಾಗಿ ನಿಂತಿದ್ದರು. ಅಭಿಮಾನ್ ಸ್ಟುಡಿಯೋದಲ್ಲಿ ನಡೆದ ಘಟನೆ ಖಂಡನೀಯ. ನಮಗೆಲ್ಲರಿಗೂ ದುಃಖ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.