ಬೆಂಗಳೂರು, ಅ. 13 (DaijiworldNews/AA): ಕ್ಯಾಮೆರಾ ಮುಂದೆ ಮಾತ್ರವಲ್ಲದೆ ಕ್ಯಾಮೆರಾ ಹಿಂದೆ ನಿಮ್ಮ ಪ್ರೀತಿ, ಆಪ್ತತೆ, ದಯೆ ನಿಮ್ಮ ವ್ಯಕ್ತಿತ್ವದ ದೊಡ್ಡ ಛಾಪು ಇತರರಲ್ಲಿ ಮೂಡಿಸುತ್ತದೆ. ನಾನು ಭೇಟಿ ಆಗಿರುವ ಅದ್ಭುತ ವ್ಯಕ್ತಿಗಳಲ್ಲಿ ನೀವೂ ಒಬ್ಬರು ಎಂದು ಡೆವಿಲ್ ಸಿನಿಮಾದ ನಾಯಕಿ ರಚನಾ ರೈ ಅವರು ನಟ ದರ್ಶನ್ ಅವರನ್ನು ಹೊಗಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ರಚನಾ ರೈ, "ನಿಮ್ಮಂಥಹಾ ಸೂಪರ್ ಸ್ಟಾರ್ ಜೊತೆಗೆ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ಅದೃಷ್ಟ. ಸೆಟ್ನಲ್ಲಿ ನಿಮ್ಮ ಏಕಾಗ್ರತೆ, ನಿಮ್ಮ ತಾಳ್ಮೆ ಮತ್ತು ನಿಮ್ಮ ಅಚಲ ಸಮರ್ಪಣೆ, ಪಾತ್ರಗಳಿಗೆ ಜೀವ ತುಂಬುವ ನಿಮ್ಮ ಆ ಪ್ರಕ್ರಿಯೆಗಳನ್ನು ಪ್ರತಿದಿನವೂ ಸೆಟ್ನಲ್ಲಿ ನೋಡುವುದು ನನಗೆ ಒಂದು ಅದ್ಭುತ ಪಾಠವಾಯ್ತು" ಎಂದಿದ್ದಾರೆ.
"ಕ್ಯಾಮೆರಾ ಮುಂದೆ ಮಾತ್ರವಲ್ಲದೆ ಕ್ಯಾಮೆರಾ ಹಿಂದೆ ನಿಮ್ಮ ಪ್ರೀತಿ, ಆಪ್ತತೆ, ದಯೆ ನಿಮ್ಮ ವ್ಯಕ್ತಿತ್ವ ಇತರರಲ್ಲಿ ದೊಡ್ಡ ಛಾಪು ಮೂಡಿಸುತ್ತದೆ. ನಾನು ಭೇಟಿ ಆಗಿರುವ ಅದ್ಭುತ ವ್ಯಕ್ತಿಗಳಲ್ಲಿ ನೀವೂ ಒಬ್ಬರು. ಒಬ್ಬ ಅದ್ಭುತ ಸಹನಟ ಆಗಿದ್ದಕ್ಕೆ ನಿಮಗೆ ಧನ್ಯವಾದಗಳು. ಅದಕ್ಕಿಂತಲೂ ಹೆಚ್ಚಾಗಿ ಒಬ್ಬ ಅದ್ಭುತ ವ್ಯಕ್ತಿಯಾಗಿ ಜೊತೆಗಿದ್ದಿದ್ದಕ್ಕೆ ನಿಮಗೆ ಧನ್ಯವಾದಗಳು" ಎಂದು ಪೋಸ್ಟ್ ಮಾಡಿದ್ದಾರೆ.
ಇನ್ನು ನಟಿ ರಚನಾ ರೈ ಹಂಚಿಕೊಂಡಿರುವ ಈ ಪೋಸ್ಟ್ ಗೆ ದರ್ಶನ್ ಅಭಿಮಾನಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.