ಬೆಂಗಳೂರು, ಡಿ. 06 (DaijiworldNews/AK):ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಟ್ರೈಲರ್ ಕುತೂಹಲ ಮೂಡಿಸಲು ಯಶಸ್ವಿಯಾಗಿದ್ದು, ಇದೇ ತಿಂಗಳು ಸಿನಿಮಾ ಬಿಡುಗಡೆ ಸಹ ಆಗಲಿದೆ. ದರ್ಶನ್ ಸಿನಿಮಾದ ಟ್ರೈಲರ್ ಬಿಡುಗಡೆ ಆದ ಬೆನ್ನಲ್ಲೆ ಸುದೀಪ್ ಅವರ ಹೊಸ ಸಿನಿಮಾದ ಟ್ರೈಲರ್ ಸಹ ಬಿಡುಗಡೆ ಆಗುತ್ತಿದೆ.

ಸುದೀಪ್ ಅವರ ‘ಮಾರ್ಕ್’ ಸಿನಿಮಾ ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದ್ದು, ಇದೀಗ ಸಿನಿಮಾದ ಟ್ರೈಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. ‘ಮಾರ್ಕ್’ ಸಿನಿಮಾದ ಟ್ರೈಲರ್ ನಾಳೆ ಅಂದರೆ ಡಿಸೆಂಬರ್ 07ರಂದು ಬೆಳಿಗ್ಗೆ 11:58ಕ್ಕೆ ಟ್ರೈಲರ್ ಬಿಡುಗಡೆ ಆಗಲಿದೆ. ಈ ಬಗ್ಗೆ ಚಿತ್ರತಂಡ ಟ್ವೀಟ್ ಮಾಡಿದೆ ,