ಬೆಂಗಳೂರು, ಡಿ. 24 (DaijiworldNews/AA): ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ 15 ಇನ್ಸ್ಟಾಗ್ರಾಂ ಖಾತೆ, 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

"ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ" ಎಂದು ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಪ್ರಶ್ನಿಸಿದ್ದರು.
ವಿಜಯಲಕ್ಷ್ಮಿ ಅವರು ಈ ಹೇಳಿಕೆ ನೀಡಿದ ಬೆನ್ನಲ್ಲೇ ಅವರ ವಿರುದ್ಧ ನಿಂದನೆಗಳ ಪೋಸ್ಟ್ ಪ್ರಕಟವಾಗುತ್ತಿದೆ. ನಿಂದನೆಯ ವಿರುದ್ಧ ಸಿಡಿದ ವಿಜಯಲಕ್ಷ್ಮಿ 15 ಇನ್ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ಫೋಟೋ ಸಮೇತ ಅವರು ದೂರು ನೀಡಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಜಯಲಕ್ಷ್ಮೀ ದೂರು ದಾಖಲಿಸಿದ್ದಾರೆ. ತಮಗೆ ಬಂದ ಹೇಟ್ ಕಮೆಂಟ್? ಸ್ಕ್ರೀನ್ಶಾಟ್ ಹಾಗೂ ಆಯಾ ಖಾತೆಗಳ ವಿವರಗಳನ್ನು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ದೂರು ಸ್ವೀಕರಿಸಿದ ಸೈಬರ್ ಅಪರಾಧ ವಿಭಾಗದ ಇನ್ಸ್ಪೆಕ್ಟರ್ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.