ಬೆಂಗಳೂರು, ಜ. 26 (DaijiworldNews/ AK): ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿ ಚಿರಪರಿಚಿತರಾದ ನಟಿ ಸಂಜನಾ ಬುರ್ಲಿ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಹೌದು ನಟಿ ಸಂಜನಾ ಅವರು ವೈದ್ಯನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಸಂಜನಾ ಮದುವೆ ಆಗುತ್ತಿರುವ ಹುಡುಗನ ಹೆಸರು ಸಮರ್ಥ್. ಅವರು ಚನ್ನಗಿರಿ ಮೂಲದವರು. ಅವರು ಎಂಬಿಬಿಎಸ್, ಎಂಡಿ ಓದಿದ್ದು, ವೃತ್ತಿಯಲ್ಲಿ ವೈದ್ಯರಾಗಿದ್ದಾರೆ ಎನ್ನಲಾಗಿದೆ.
ಸಂಜನಾ ಅವರು ‘ಪುಟ್ಟಕ್ಕನ ಮಕ್ಕಳು’ ಬಳಿಕ ಕಲರ್ಸ್ನ ‘ಶ್ರೀ ಗಂಧದಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.