ರಾಜಸ್ಥಾನ, ಫೆ. 26 (DaijiworldNews/AA): ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹವು ರಾಜಸ್ಥಾನದ ಉದಯಪುರದ ಐಶಾರಾಮಿ ರೆಸಾರ್ಟ್ನಲ್ಲಿ ಅದ್ಧೂರಿಯಾಗಿ ನೆರವೇರಿದೆ.

ಈ ಜೋಡಿ ಇಂದು ಬೆಳಗ್ಗೆ 8 ಗಂಟೆಗೆ ನಡೆದ ಶುಭ ಮುಹೂರ್ತದಲ್ಲಿ ತೆಲುಗು ಸಂಪ್ರದಾಯದಂತೆ ಸಪ್ತಪದಿ ತುಳಿದಿದ್ದಾರೆ. ಎರಡೂ ಕುಟುಂಬದ ಸದಸ್ಯರು, ಹಿರಿಯರು ಮತ್ತು ಆಪ್ತೇಷ್ಟರ ಸಮ್ಮುಖದಲ್ಲಿ ವಿರೋಶ್ ಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿದೆ.
ಕಳೆದ ಕೆಲ ವರ್ಷಗಳಿಂದಳೂ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಪರಸ್ಪರ ಪ್ರೀತಿಸುತ್ತಿದ್ದು, ಎಲ್ಲಿಯೂ ಅಧಿಕೃತವಾಗಿ ಹೇಳಿಕೆ ನೀಡಿರಲಿಲ್ಲ. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಉದಯಪುರದಲ್ಲಿ ನಿನ್ನೆ ಹಳದಿ ಮತ್ತು ಸಂಗೀತ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇಂದು ಸಂಜೆ ವೇಳೆಗೆ ಕೊಡವ ಸಂಪ್ರದಾಯದಂತೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಮತ್ತೊಮ್ಮೆ ನಡೆಯಲಿದೆ. ಇಬ್ಬರೂ ಸಹ ಭಿನ್ನ ಭಿನ್ನ ಸಂಪ್ರದಾಯಕ್ಕೆ ಸೇರಿದ ಕುಟುಂಬದವರಾಗಿರುವ ಕಾರಣ ಎರಡೂ ಕುಟುಂಬಗಳ ಸಂಪ್ರದಾಯ, ಆಚರಣೆಗೆ ಚ್ಯುತಿ ಬಾರದಂತೆ ಇವರಿಬ್ಬರ ವಿವಾಹ ನಡೆಯುತ್ತಿದೆ.