ಮುಂಬೈ,ಮಾ. 10 (DaijiworldNews/AK): ಬಾಲಿವುಡ್ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ‘ಧುರಂಧರ್: ದಿ ರಿವೇಂಜ್’ ಬಿಡುಗಡೆಗೆ ಕೆಲವೇ ದಿನಗಳ ಬಾಕಿ ಇದೆ. ಆದರೆ ಸಿನಿಮಾ ದೇಶಾದ್ಯಂತ ಟಿಕೆಟ್ ಬುಕಿಂಗ್ನಲ್ಲಿ ಹೊಸ ದಾಖಲೆ ಬರೆಯುತ್ತಿದೆ.

ಮಾರ್ಚ್ 18ರಂದು ಆಯ್ದ ಚಿತ್ರಮಂದಿರಗಳಲ್ಲಿ ಪೇಯ್ಡ್ ಪ್ರಿವ್ಯೂ ಆರಂಭವಾಗಲಿದ್ದು, ಟಿಕೆಟ್ ಬೆಲೆಗಳು ಗಗನಕ್ಕೇರಿದೆ. ಹಾಗಿದ್ದರೂ ಕೂಡ ಪ್ರೇಕ್ಷಕರು ಮುಗಿಬಿದ್ದು ಬುಕ್ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಈ ಸಿನಿಮಾದ ಟಿಕೆಟ್ಗಳು ಬರೋಬ್ಬರಿ 3100 ರೂಪಾಯಿಗೆ ಮಾರಾಟ ಆಗಿವೆ. ರಣವೀರ್ ಸಿಂಗ್ ನಟನೆಯ ಈ ಚಿತ್ರದ ಮೇಲೆ ಜನರಿಗೆ ಎಲ್ಲಿಲ್ಲದ್ದ ಕ್ರೇಜ್. ಅಧಿಕ ದರವಿದ್ದರೂ ಬಹುತೇಕ ಶೋಗಳು ಈಗಾಗಲೇ ಹೌಸ್ಫುಲ್ ಆಗಿವೆ.
ಕೇವಲ ಹಿಂದಿ ಮಾತ್ರವಲ್ಲದೆ, ದಕ್ಷಿಣ ಭಾರತದ ಭಾಷೆಗಳಲ್ಲೂ ಈ ಚಿತ್ರಕ್ಕೆ ಭಾರಿ ಬೇಡಿಕೆ ಇದೆ. ಕನ್ನಡ ಮತ್ತು ತೆಲುಗಿನಲ್ಲಿ ಕೂಡ ‘ಧುರಂಧರ್ 2’ ಸಿನಿಮಾದ ಟಿಕೆಟ್ಗಳು 400 ರೂಪಾಯಿ ಆಸುಪಾಸಿನಲ್ಲಿ ಮಾರಾಟ ಆಗುತ್ತಿವೆ.
ಅಡ್ವಾನ್ಸ್ ಬುಕಿಂಗ್ ಆರಂಭವಾದ ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾದ ಸುಮಾರು 3 ಲಕ್ಷ ಟಿಕೆಟ್ಗಳನ್ನು ಮಾರಾಟ ಆಗಿವೆ. ಈ ಮೂಲಕ ಬಿಡುಗಡೆಗೂ ಮುನ್ನವೇ ಭಾರತದಲ್ಲಿ 15 ಕೋಟಿಗೂ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ಇದು ಬಾಲಿವುಡ್ ಚಿತ್ರವೊಂದರ ಪ್ರೀಮಿಯರ್ ಶೋಗೆ ಸಿಕ್ಕಿರುವ ಅತಿ ದೊಡ್ಡ ಮೊತ್ತದ ಕಲೆಕ್ಷನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.