ಮುಂಬೈ, ಮಾ. 12 (DaijiworldNews/AK): ಕುಂಬಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಅವರ ಮದುವೆಯ ವಿಷಯ ಸಖತ್ ಚರ್ಚೆ ಆಗುತ್ತಿದೆ. ಯಾವುದೇ ಸೂಚನೆ ನೀಡಿದೇ ಸಡನ್ ಆಗಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿಸಾ ಅವರು ದಾಂಪತ್ಯ ಜೀವನ ಕಾಲಿಟ್ಟಿದ್ದಾರೆ. ರುದ್ರಾಕ್ಷಿ ಮಾಲೆ ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಮೊನಾಲಿಸಾ ಭೋಸ್ಲೆ ಅವರಿಗೆ ಚಿತ್ರರಂಗದಿಂದ ಅವಕಾಶ ಸಿಕ್ತು. ನಟಿಯಾಗಿ ಅವರು ಚಿತ್ರರಂಗಕ್ಕೆ ಎಂಟ್ರಿ ನೀಡಿದ ಬಳಿಕ ಅವರಿಗೆ ಮೊಹಮ್ಮದ್ ಫರ್ಮಾನ್ ಪರಿಚಯ ಆಯಿತು. ಮೊಹಮ್ಮದ್ ಫರ್ಮಾನ್ ಕೂಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ವ್ಯಕ್ತಿ. ಅವರು ನಟನಾಗಿ ಮತ್ತು ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಉತ್ತರ ಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ.
ಮೊಹಮ್ಮದ್ ಫರ್ಮಾನ್ ಮತ್ತು ಮೊನಾಲಿಸಾ ಭೋಸ್ಲೆ ನಡುವೆ ಪರಿಚಯ ಬೆಳೆದಿದ್ದು ಸೋಶಿಯಲ್ ಮೀಡಿಯಾ ಮೂಲಕ. ನಂತರ ಅವರು ಶೂಟಿಂಗ್ ಸೆಟ್ನಲ್ಲಿ ಭೇಟಿಯಾದರು. ಇಬ್ಬರ ನಡುವೆ ಪ್ರೀತಿ ಬೆಳೆಯಿತು. 6 ತಿಂಗಳ ಕಾಲ ಡೇಟಿಂಗ್ ಮಾಡಿದ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. ಬೇರೆ ಬೇರೆ ಧರ್ಮದವರಾದ ಕಾರಣ ಅವರ ಮನೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ವಿರೋಧದ ನಡುವೆಯೂ ಅವರು ಮದುವೆ ಆಗಿದ್ದಾರೆ.
ಕಳೆದ 6 ತಿಂಗಳಿಂದ ಮೊನಾಲಿಸಾ ಹಾಗೂ ಮೊಹಮ್ಮದ್ ಫರ್ಮಾನ್ ಪ್ರೀತಿಸುತ್ತಿದ್ದರು. ಅದರ ಬಗ್ಗೆ ಫರ್ಮಾನ್ ಮಾತನಾಡಿದ್ದಾರೆ. ‘ಈ ಆರು ತಿಂಗಳುಗಳು ನಮಗೆ 60 ವರ್ಷದ ಪ್ರೀತಿಯ ಹಾಗೆ ಅನಿಸಿತು. ಆದಕ್ಕಾಗಿಯೇ ನಾವು ಮದುವೆ ಆಗಲು ನಿರ್ಧರಿಸಿದೆವು’ ಎಂದು ಅವರು ಹೇಳಿದ್ದಾರೆ. ಕೇರಳದ ದೇವಸ್ಥಾನವೊಂದರಲ್ಲಿ ಹಿಂದೂ ಧರ್ಮದ ಪ್ರಕಾರ ಈ ಮದುವೆ ನಡೆದಿದೆ.