ಬೆಂಗಳೂರು, ಏ. 29 (DaijiworldNews/AK): ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ದಂಪತಿ ಈ ಕುರಿತು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, Our universe is expanding ಎಂದು ಬರೆದುಕೊಂಡಿದ್ದಾರೆ. ಇದೀಗ ಬೇಬಿ ಬಂಪ್ ಫೋಟೋಶೂಟ್ ಮಾಡಿದ್ದು, ಸುಂದರವಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
2025ರ ಫೆ.16ರಂದು ಡಾಲಿ ಧನಂಜಯ್ ಅವರು ಡಾ.ಧನ್ಯತಾ ಜೊತೆ ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಮತ್ತು ಆರತಕ್ಷತೆಗೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭ ಹಾರೈಸಿದ್ದರು.