ಬೆಂಗಳೂರು, ಮೇ. 02 (DaijiworldNews/AK): ಸ್ಯಾಂಡಲ್ವುಡ್ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿ ಶೀಘ್ರದಲ್ಲೇ ಅಪ್ಪ ಅಮ್ಮ ಆಗುವ ಸುದ್ದಿಯನ್ನು ಇತ್ತೀಚೆಗಷ್ಟೇ ಹಂಚಿಕೊಂಡಿದ್ದರು. ಇದೀಗ ಮೇ 2ರಂದು ದಂಪತಿಗೆ ಮಗು ಜನಿಸಿದ್ದು, ಮನೆಯಲ್ಲಿ ಸಂಭ್ರಮ ಮನೆಮಾಡಿದೆ.

ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಹಂಚಿಕೊಂಡಿರುವ ಧನಂಜಯ್, ತಾವು ತಂದೆಯಾದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.
ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಅವರ ಮಧ್ಯೆ ಪ್ರೀತಿ ಮೂಡಿ, ಇಬ್ಬರೂ ಹಿರಿಯರ ಸಮ್ಮತಿಯೊಂದಿಗೆ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.