ಚೆನ್ನೈ, ಜು. 29 (DaijiworldNews/AK): ಖ್ಯಾತ ನಟ ರವಿ ಮೋಹನ್ ಹಾಗೂ ಅವರ ಪತ್ನಿ ಆರತಿ ನಡುವಿನ ವಿಚ್ಛೇದನ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ.

ಪತ್ನಿ ಬೇಡಿಕೆಯಿಟ್ಟಿದ್ದ ಬೃಹತ್ ಮೊತ್ತದ ಜೀವನಾಂಶವನ್ನು ಕೋರ್ಟ್ ನಿರಾಕರಿಸಿದೆ. ಜೊತೆಗೆ, ತಂದೆಗೆ ತನ್ನ ಮಕ್ಕಳನ್ನು ಭೇಟಿಯಾಗಲು ಮುಕ್ತ ಅವಕಾಶ ನೀಡಿದೆ. ಚಿತ್ರರಂಗದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸ್ಟಾರ್ ದಂಪತಿಯ ಕಾನೂನು ಹೋರಾಟದಲ್ಲಿ ರವಿ ಮೋಹನ್ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತೆ ಆಗಿದೆ.
ನಟ ರವಿ ಮೋಹನ್ ಅವರಿಂದ ಪ್ರತಿ ತಿಂಗಳು 40 ಲಕ್ಷ ರೂಪಾಯಿ ಜೀವನಾಂಶ ಕೊಡಿಸಬೇಕು ಎಂದು ಪತ್ನಿ ಆರತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಚೆನ್ನೈನ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ. ಅಂತಿಮ ತೀರ್ಪು ಬರುವವರೆಗೂ ಪ್ರತಿ ತಿಂಗಳು 3 ಲಕ್ಷ ರೂಪಾಯಿ ನೀಡುವಂತೆ ನಟನಿಗೆ ಕೋರ್ಟ್ ನಿರ್ದೇಶನ ನೀಡಿದೆ.
ದುಡ್ಡಿನ ವಿಚಾರದ ಜೊತೆಗೆ ಮಕ್ಕಳ ಭೇಟಿಗೆ ಸಂಬಂಧಿಸಿದಂತೆ ಕೋರ್ಟ್ ಮಹತ್ವದ ಆದೇಶ ನೀಡಿದೆ. ರವಿ ಮೋಹನ್ ತಮ್ಮ ಇಬ್ಬರು ಗಂಡು ಮಕ್ಕಳಾದ ಆರವ್ ಮತ್ತು ಅಯಾನ್ ಅವರನ್ನು ಭೇಟಿ ಮಾಡಲು ಯಾವುದೇ ನಿರ್ಬಂಧ ಇರಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.