ಮುಂಬೈ, ಆ. 04 (DaijiworldNews/AA): ನಟಿ ಮೃಣಾಲ್ ಠಾಕೂರ್ ಅವರ ಎಐ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಡಿಟ್ ಮಾಡಿರುವ ಚಿತ್ರಗಳನ್ನು ತಕ್ಷಣವೇ ತೆಗೆದುಹಾಕಬೇಕು. ಇಲ್ಲವಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ನಟಿ ಎಚ್ಚರಿಕೆ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದ ಎಕ್ಸ್ ಖಾತೆಯೊಂದರಲ್ಲಿ ಮೃಣಾಲ್ ಅವರದ್ದು ಎನ್ನಲಾದ ಆಕ್ಷೇಪಾರ್ಹ ಚಿತ್ರಗಳನ್ನು ಹಂಚಿಕೊಳ್ಳಲಾಗಿತ್ತು. ಈ ಪೋಸ್ಟ್ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು, "ಈ ರೀತಿಯ ಫೋಟೊ ಹಂಚಿಕೊಳ್ಳುವುದು ಸಂಪೂರ್ಣವಾಗಿ ಕಾನೂನುಬಾಹಿರ. ತಕ್ಷಣವೇ ಈ ಪೋಸ್ಟ್ ಡಿಲೀಟ್ ಮಾಡಬೇಕು. ಇಲ್ಲದಿದ್ದರೆ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲಾಗುತ್ತದೆ" ಎಂದು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೆಲವರು ನಟಿಯರ ಎಡಿಟ್ ಮಾಡಿದ ಫೋಟೋಗಳ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದೀಗ ನಟಿ ಮೃಣಾಲ್ ಠಾಕೂರ್ ಅವರ ಎಐ ಫೋಟೋ ವೈರಲ್ ಆದ ಬೆನ್ನಲ್ಲೇ ಸೈಬರ್ ಅಪರಾಧಿಗಳ ವಿರುದ್ಧ ಕಾನೂನು ಕ್ರಮಕ್ಕೆ ನಟಿ ಮುಂದಾಗಿದ್ದಾರೆ.