ಬೆಂಗಳೂರು, ಆ. 05 (DaijiworldNews/AA): ಕಾವೇರಿ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಘೋಷಿಸಿರುವ ನಟಿ ರಮ್ಯಾ ಆಗಸ್ಟ್ ೧೩ರ ಅಖಂಡ ಕರ್ನಾಟಕ ಬಂದ್ಗೆ ಬೆಂಬಲ ಸೂಚಿಸಿದ್ದಾರೆ.

ಕಾವೇರಿ ನೀರಿನ ವಿಚಾರವಾಗಿ ಆಗಸ್ಟ್ 13ರಂದು ಕರೆ ನೀಡಲಾಗಿರುವ ಅಖಂಡ ಕರ್ನಾಟಕ ಬಂದ್ ಬಗ್ಗೆ ಮಾತನಾಡಿದ ಅವರು, "ನಾನು ಮಂಡ್ಯದವಳು. ಕಾವೇರಿ ವಿಚಾರ ಬಂದಾಗ ರೈತರ ಪರವಾಗಿ ನಿಲ್ಲುವುದು ನನ್ನ ಜವಾಬ್ದಾರಿ. ನನ್ನ ಬೆಂಬಲ ಖಂಡಿತ ಇರುತ್ತದೆ" ಎಂದು ತಿಳಿಸಿದ್ದಾರೆ.
"ಕಾವೇರಿ ವಿಚಾರವಾಗಿ ಈ ಹಿಂದೆಯೂ ಹೋರಾಟಗಳಲ್ಲಿ ಭಾಗಿಯಾಗಿದ್ದೇನೆ. ಕಾವೇರಿ ನೀರಿನ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಚರ್ಚೆಯಾಗುತ್ತಿದ್ದಾಗಲೂ ಅಲ್ಲಿದ್ದೆ ಎಂದು ರಮ್ಯಾ ಹೇಳಿದ್ದಾರೆ. ರೈತರ ಹಿತದ ಪ್ರಶ್ನೆ ಬಂದಾಗ ಯಾವುದೇ ಹಿಂಜರಿಕೆಯಿಲ್ಲದೆ ಬೆಂಬಲ ನೀಡುತ್ತೇನೆ. ಇದನ್ನು ಮತ್ತೆ ಹೇಳಬೇಕಾದ ಅಗತ್ಯವೇ ಇಲ್ಲ. ನಾನು ಯಾವಾಗಲೂ ರೈತರ ಪರವಾಗಿಯೇ ಇರುತ್ತೇನೆ" ಎಂದು ಹೇಳಿದ್ದಾರೆ.