ಮುಂಬೈ, ಆ. 08 (DaijiworldNews/AA): ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಮುಂಬೈ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟಿದ್ದಾರೆ.

ಗಣೇಶ್(41) ಮೃತ ಪೊಲೀಸ್ ಕಾನ್ಸ್ಟೇಬಲ್.
ಗಣೇಶ್ ಅವರು ಇದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಬಳಿಕ ಅವರನ್ನು ಸಹ ಪೊಲೀಸರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅದಾಗಲೇ ಅವರು ಮೃತಪಟ್ಟಿರಿವುದಾಗಿ ವೈದ್ಯರು ತಿಳಿಸಿದ್ದಾರೆ. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ಗೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಅವರಿಗೆ ಪದೇ ಪದೇ ಬೆದರಿಕೆಗಳು ಬರುತ್ತಿದೆ. ಹೀಗಾಗಿ ಸಲ್ಮಾನ್ ಖಾನ್ ಅವರ ಮುಂಬೈನಲ್ಲಿರುವ ನಿವಾಸದ ಹೊರಗೆ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ.