ಬೆಂಗಳೂರು, ನ.16 (DaijiworldNews/AA): ಅವ್ಯಾಚ ಶಬ್ದಗಳಿಂದ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್ ನೀಡಿದ ದೂರಿನ್ವಯ ಒಂದು ಪ್ರಕರಣ ದಾಖಲಾಗಿತ್ತು. ಭೋಜರಾಜ್ ರೈ ದೂರಿನ ಮೇರೆಗೆ ಧನ್ವೀರ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದರೆ, ನಟ ಝೈದ್ ಖಾನ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ ನೀಡಿದ ದೂರಿನ ಅನ್ವಯ ಇನ್ನೊಂದು ಪ್ರಕರಣ ದಾಖಲಾಗಿದೆ.
ಈ ಎಲ್ಲಾ ಎಫ್ಐಆರ್ಗಳನ್ನು ರದ್ದುಪಡಿಸುವಂತೆ ಕೋರಿ ನಟ ಧನ್ವೀರ್ ಅರ್ಜಿ ಸಲ್ಲಿಸಿದ್ದಾರೆ. ಸಲ್ಲಿಸಲಾಗಿರುವ ಈ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದೆ.