ಬೆಂಗಳೂರು, ಜು 15 (Daijiworld News/MSP): ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಸರ್ಜಾ ಅವರಿಗೆ ಕೊವೀಡ್ -19 ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಧ್ರುವ ಅವರೇ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.

ಧ್ರುವ ಸರ್ಜಾ ಮತ್ತು ಅವರ ಪತ್ನಿ ಇಬ್ಬರಿಗೂ ಸೋಂಕು ಇರುವುದು ವರದಿಯಲ್ಲಿ ಗೊತ್ತಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಸೋಂಕಿನ ಗುಣಲಕ್ಷಣ ಕಂಡುಬಂದಿದೆ.
ಸೋಂಕು ತಗುಲಿರುವ ಬಗ್ಗೆ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಧ್ರುವಸರ್ಜಾ, ' ನನ್ನ ಹಾಗೂ ನನ್ನ ಪತ್ನಿಯ ಕೋವಿಡ್ - 19 ಪರೀಕ್ಷೆಯ ವರದಿ ಪಾಸಿಟಿವ್ ಬಂದಿದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆ ದಾಖಲಾಗುತ್ತಿದ್ದೇವೆ. ನಾವು ಗುಣಮುಖರಾಗಿ ಬರುವ ವಿಶ್ವಾಸವಿದೆ. ನಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು' ಎಂದು ಅವರು ಕೋರಿದ್ದಾರೆ.
ಧ್ರುವ ಸರ್ಜಾ ಅವರ ಅಣ್ಣ ಚಿರಂಜೀವಿ ಸರ್ಜಾ ಅವರು ಇತ್ತೀಚೆಗೆ ತಾನೇ ಮೃತಪಟ್ಟಿದ್ದರು ಸ್ಮರಿಸಬಹುದಾಗಿದೆ.