ಮಂಗಳೂರು, ಜು.19 (DaijiworldNews/MB) : ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ಕೋರಿಮಂಜೆ ತುಳು ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ, ''ಈಗಾಗಲೇ ಭೋಜರಾಜ್ ಎಮ್ಬಿಬಿಎಸ್ ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು ಶೀಘ್ರದಲ್ಲೇ ಅಂತಿಮ ಹಂತದ ಚಿತ್ರೀಕರಣ ನಡೆಯಲಿದೆ. ಕೋರಿಮಂಜೆ ಸಿನಿಮಾದ ಚಿತ್ರೀಕರಣವು ಶೀಘ್ರದಲ್ಲೇ ಆರಂಭವಾಗಲಿದೆ'' ಎಂದು ತಿಳಿಸಿದ್ದಾರೆ.
ಈ ಸಿನಿಮಾದಲ್ಲಿ ತುಳುನಾಡ ಮಾಣಿಕ್ಯ ಅರವಿಂದ್ ಬೋಳಾರ್ , ಭೋಜರಾಜ್ ವಾಮಂಜೂರು ಮೊದಲಾದ ಖ್ಯಾತ ಹಾಸ್ಯ ನಟರು ಪಾತ್ರಕ್ಕೆ ಜೀವ ತುಂಬಲಿದ್ದಾರೆ.