ಖೈಬರ್ ಪಖ್ತುಂಖ್ವಾ, ಸೆ.04 (DaijiworldNews/TA):ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ 40 ವರ್ಷದ ಮಹಿಳಾ ಶಾಲಾ ಶಿಕ್ಷಕಿಯನ್ನು ಆಕೆಯ ತಂದೆಯ ಎದುರೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬುನೆರ್ನ ಜಂಗ್ದಾರ ತೊತಲೈ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಶಂಕಿತ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಸಂತ್ರಸ್ತೆಯ ತಂದೆಯ ಪ್ರಕಾರ, ಶಂಕಿತನು ಈ ಹಿಂದೆ ತನ್ನ ಮಗಳ ಮೇಲೆ ಹಲ್ಲೆ ನಡೆಸಿದ್ದನು ಮತ್ತು ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವರದಿಯಾಗಿದೆ.
ಅಪರಾಧ ನಡೆದ ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಹಿಳೆಯ ಮೃತ ದೇಹವನ್ನು ವೈದ್ಯಕೀಯ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಗಿದೆ. ಹತ್ಯೆಯ ನಂತರ ದಾಳಿಕೋರರು ಪರಾರಿಯಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾರೆ.