ಇಸ್ಲಾಮಾಬಾದ್, ಮೇ 28 (Daijiworld News/MSP): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಅಭೂತಪೂರ್ವ ಜಯ ಸಾಧಿಸಿದ್ದು, ನರೇಂದ್ರ ಮೋದಿಯವರು ಎರಡನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಿ ಮೇ 30 ರಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಬಿಮ್ಸ್ ಟೆಕ್ ನ ಬಾಂಗ್ಲಾದೇಶ, ಭೂತಾನ್, ನೇಪಾಳ, ಶ್ರೀಲಂಕಾ, ಮ್ಯಾನ್ಮಾರ್ ಹಾಗೂ ಥೈಲ್ಯಾಂಡ್ ದೇಶಗಳ ಪ್ರತಿನಿಧಿಗಳನ್ನು ಭಾರತ ಆಹ್ವಾನಿಸಿದೆ. ಆದ್ರೆ ಪಾಕಿಸ್ತಾನಕ್ಕೆ ಆಹ್ವಾನವನ್ನು ನೀಡಿಲ್ಲ.
2014ರಲ್ಲಿ ಮೋದಿ ಅವರ ಪ್ರಮಾಣ ವಚನ ಸಮಾರಂಭಕ್ಕೆ ಪಾಕಿಸ್ತಾನವನ್ನು ಕೂಡ ಆಹ್ವಾನಿಸಲಾಗಿತ್ತು. ಆದ್ರೆ ಈ ಬಾರಿ ರೆಯ ಎಲ್ಲಾ ದೇಶಗಳನ್ನು ಆಹ್ವಾನಿಸಿ ಪಾಕಿಸ್ತಾನವನ್ನು ದೂರ ಉಳಿಸಿಕೊಂಡಿರುವ ಭಾರತದ ನಡೆಗೆ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸದೇ ಇರುವುದು ಭಾರತದ ಆಂತರಿಕ ವಿಷಯವಾಗಿದೆ ಎಂದಿದ್ದಾರೆ.
ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಮೇಲೆ ಪಾಕಿಸ್ತಾನಿ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು. ಈ ದಾಳಿ ಬಳಿಕ ಎರಡೂ ದೇಶಗಳ ನಡುವಿನ ಸಂಬಂಧ ಹದಗೆಟ್ಟಿದೆ.