ಕುವೈತ್, ಡಿ.22(DaijiworldNews/AA): ಕುವೈತ್ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರು ಬಯಾನ್ ಅರಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುವೈತ್ನ ಅತ್ಯುನ್ನತ ನಾಗರಿಕ ಗೌರವವಾದ 'ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಅನ್ನು ಪ್ರದಾನ ಮಾಡಿದರು.
'ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಗೌರವವು ಪ್ರಧಾನಿ ಮೋದಿಯವರಿಗೆ ದೇಶವೊಂದು ನೀಡಿದ 20ನೇ ಅಂತಾರಾಷ್ಟ್ರೀಯ ಗೌರವವಾಗಿದೆ. 'ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಕುವೈತ್ನ ನೈಟ್ಹುಡ್ ಆರ್ಡರ್ ಆಗಿದೆ. ಇದನ್ನು ರಾಷ್ಟ್ರದ ಮುಖ್ಯಸ್ಥರು, ವಿದೇಶಿ ಸಾರ್ವಭೌಮರು ಮತ್ತು ವಿದೇಶಿ ರಾಜಮನೆತನದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ನೀಡಿ ಗೌರವಿಸಲಾಗುತ್ತದೆ.
'ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಅನ್ನು ಹಿಂದೆ ಬಿಲ್ ಕ್ಲಿಂಟನ್, ಪ್ರಿನ್ಸ್ ಚಾರ್ಲ್ಸ್ ಮತ್ತು ಜಾರ್ಜ್ ಬುಷ್ರಂತಹ ನಾಯಕರಿಗೆ ಪ್ರದಾನ ಮಾಡಲಾಗಿದೆ. ಕುವೈತ್ನ ಬಯಾನ್ ಪ್ಯಾಲೇಸ್ನಲ್ಲಿ ಪ್ರಧಾನಿ ಮೋದಿಯವರಿಗೆ ಗೌರವ ರಕ್ಷೆಯನ್ನು ನೀಡಲಾಯಿತು. ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಕುವೈತ್ನ ಸರ್ಕಾರಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.