ಲಂಡನ್, ಜೂ 09 (Daijiworld News/SM): ಭಾರತದ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಇಂದು ಓವಲ್ ಕ್ರೀಡಾಂಗಣದಲ್ಲಿ ಪತ್ತೆಯಾಗಿದ್ದಾರೆ.
ಭಾರತೀಯ ಬ್ಯಾಂಕ್ ಗಳಿಗೆ ಬಹುಕೋಟಿ ವಂಚನೆ ಮಾಡಿ ವಿಜಯ್ ಮಲ್ಯ ಲಂಡನ್ ನಲ್ಲಿ ತಲೆಮರೆಸಿಕೊಂಡಿದ್ದು, ಇಂದು ಲಂಡನ್ ನಲ್ಲಿ ಮಾಧ್ಯಮಗಳ ಕ್ಯಾಮೆರಾಗಳಿಗೆ ಸೆರೆಯಾಗಿದ್ದಾರೆ.
ಲಂಡನ್ ನ ಕೆನ್ನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ವೀಕ್ಷಣೆಗೆಂದು ಮಲ್ಯ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸುದ್ದಿಗೆಂದು ತೆರಳಿದ್ದ ಮಾಧ್ಯಮ ಪ್ರತಿನಿಧಿಗಳು ಮಲ್ಯರನ್ನು ಪ್ರಶ್ನಿಸಿದ್ದಾರೆ. ಆದರೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಲು ಮಲ್ಯ ಹಿಂದೇಟು ಹಾಕಿದ್ದಾರೆ. ಅಲ್ಲದೆ ಸ್ಥಳದಿಂದ ಅವರು ಕಾಲ್ಕಿತ್ತಿದ್ದಾರೆ.