ಜೆರುಸಲೇಂ, ಜ.25 (DaijiworldNews/AA): ಒತ್ತೆಯಾಳಾಗಿ ಇಟ್ಟುಕೊಂಡಿದ್ದ ನಾಲ್ವರು ಇಸ್ರೇಲಿ ಮಹಿಳಾ ಸೈನಿಕರನ್ನು ಹಮಾಸ್ ಉಗ್ರರು ಬಿಡುಗಡೆಗೊಳಿಸಿದ್ದಾರೆ.
ಒತ್ತೆಯಾಳಾಗಿದ್ದ ನಾಲ್ವರು ಇಸ್ರೇಲಿ ಮಹಿಳಾ ಸೈನಿಕರನ್ನು ಹಮಾಸ್ ಉಗ್ರರು ರೆಡ್ ಕ್ರಾಸ್ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ. ಬಳಿಕ ಅವರನ್ನು ಗಾಜಾದಿಂದ ವಾಹನದಲ್ಲಿ ಕರೆದುಕೊಂಡು ಹೋಗಲಾಯಿತು.
ಈ ನಾಲ್ವರು ಇಸ್ರೇಲಿ ಮಹಿಳಾ ಸೈನಿಕರನ್ನು 2023ರ ಅಕ್ಟೋಬರ್ 7ರಂದು ಗಾಜಾ ಗಡಿಯಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ನಹಲ್ ಓಜ್ ಮಿಲಿಟರಿ ನೆಲೆಯಲ್ಲಿ ಸೆರೆಹಿಡಿಯಲಾಗಿತ್ತು. ಅವರನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಶುಕ್ರವಾರ ತಿಳಿಸಿತ್ತು. ಇದೀಗ ಇಸ್ರೇಲ್ ಮತ್ತು ಗಾಜಾ ನಡುವಿನ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ಇಸ್ರೇಲಿ ಮಹಿಳಾ ಸೈನಿಕರನ್ನು ಬಿಡುಗಡೆ ಮಾಡಲಾಗಿದೆ.
ಒಪ್ಪಂದದ ಅನುಸಾರ ಮಹಿಳಾ ಸೈನಿಕರ ಬಿಡುಗಡೆ ಬೆನ್ನಲ್ಲೇ ಇಸ್ರೇಲ್ ಪ್ಯಾಲೆಸ್ತೇನಿಯನ್ ಕೈದಿಗಳನ್ನು ಬಿಡುಗಡೆ ಮಾಡಬೇಕು.