ಬಿಶ್ಕೆಕ್, ಜೂ 13 (Daijiworld News/SM): ಶಾಂಘೈ ಸಹಕಾರ ಸಂಘದ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ. ಚೀನಾ ಅಧ್ಯಕ್ಷ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಮಾತುಕತೆ ನಡೆಸಿದ್ದು, ಸಫಲವಾಗಿದೆ.
ನರೇಂದ್ರ ಮೋದಿ ಅವರು 2ನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ರನ್ನು ಭೇಟಿ ಮಾಡಿದ್ದಾರೆ. ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಬಲಪಡಿಸುವ ಕುರಿತಂತೆ ಮಾತುಕತೆ ನಡೆಸಿದ್ದಾರೆ.
ಪ್ರಧಾನಿ ಮೋದಿ ಅವರ ಮೊದಲ ಅವಧಿಯಲ್ಲಿ ಕ್ಸಿ ಜಿಂಗ್ ಪಿಂಗ್ ರನ್ನು 10 ಬಾರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ಉಭಯ ದೇಶಗಳು ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಸಲು ಹೆಚ್ಚಿನ ಒತ್ತು ನೀಡಿವೆ ಎಂದು ತಿಳಿದು ಬಂದಿದೆ.
ಇನ್ನು ಮಾತುಕತೆ ವೇಳೆ ಪ್ರಧಾನಿ ಮೋದಿ ಅವರು ಕ್ಸಿ ಜಿನ್ಪಿಂಗ್ ಅವರನ್ನು ಭಾರತಕ್ಕೆ ಬರುವಂತೆ ಆಹ್ವಾನ ನೀಡಿದ್ದು ಮೋದಿ ಆಹ್ವಾನವನ್ನು ಸ್ವೀಕರಿಸಿರುವ ಜಿನ್ಪಿಂಗ್ ಈ ವರ್ಷ ಭಾರತಕ್ಕೆ ಭೇಟಿ ನೀಡುವ ಕುರಿತು ಉತ್ಸಾಹ ತೋರಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ವಿಜಯ್ ಗೋಖಲೆ ತಿಳಿಸಿದ್ದಾರೆ.