ಸಿಂಗಾಪುರ, ಏ.08(DaijiworldNews/TA) : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರ ಮಾರ್ಕ್ ಶಂಕರ್ ಸಿಂಗಾಪುರದಲ್ಲಿರುವ ತಮ್ಮ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ಜನ ಸೇನಾ ಪಕ್ಷ ತಿಳಿಸಿದೆ.

ಈ ಘಟನೆಯಿಂದ ಮಾರ್ಕ್ ಅವರ ಕೈ ಮತ್ತು ಕಾಲುಗಳಿಗೆ ಸುಟ್ಟ ಗಾಯಗಳಾಗಿದ್ದು, ಹೊಗೆಯಿಂದ ಶ್ವಾಸಕೋಶದ ಮೇಲೂ ಪರಿಣಾಮ ಬೀರಿದೆ ಮತ್ತು ಅವರು ಪ್ರಸ್ತುತ ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜನಸೇನಾ ಪಕ್ಷ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪವನ್ ಕಲ್ಯಾಣ್ ತಕ್ಷಣವೇ ಸಿಂಗಾಪುರಕ್ಕೆ ತೆರಳಲಿದ್ದಾರೆ ಎಂದು ಹೇಳಲಾಗಿದೆ. ಅವರ ಮಗನ ಆರೋಗ್ಯದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಪವನ್ ಕಲ್ಯಾಣ್ ಮೂರನೇ ಪತ್ನಿ ಅನ್ನಾ ಲೆಜ್ನೇವಾ ಅವರಿಗೆ ಇಬ್ಬರು ಮಕ್ಕಳು ಮಾರ್ಕ್ ಶಂಕರ್ ಮತ್ತು ಪೊಲೇನಾ ಅಂಜನಾ. ಈ ಇಬ್ಬರೂ ಸಹ ಸಿಂಗಾಪುರದಲ್ಲಿ ನೆಲೆಸಿದ್ದಾರೆ. ಅಲ್ಲಿಯೇ ಶಿಕ್ಷಣ ಪಡೆಯುತ್ತಿದ್ದಾರೆ.