ಫ್ರಾನ್ಸ್, ಆ 26 (DaijiworldNews/SM): ಜಮ್ಮು-ಕಾಶ್ಮೀರ ವಿಚಾರವಾಗಿ ಭಾರತ-ಪಾಕಿಸ್ತಾನ ನದುವೆ ವಿವಾದ ಶೀತಲ ಸಮರ ಉಂಟಾಗಿದ್ದು, ಇದು ದ್ವಿಪಕ್ಷೀಯ ವಿಚಾರವಗಿದೆ. ಇದರಲ್ಲಿ ಮೂರನೇ ವ್ಯಕ್ತಿ ಮೂಗು ತುರಿಸುವುದು ಸರಿಯಲ್ಲ ಎಂದು ವಿಶ್ವದ ದೊಡ್ಡಣ್ಣ ಅಮೇರಿಕಾ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಮೋದಿ ಮನವರಿಕೆ ಮಾಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳು ದ್ವಿಪಕ್ಷೀಯವಾಗಿದ್ದು, ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಯಾವುದೇ ಅವಕಾಶವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.
ಫ್ರಾನ್ಸ್ನ ಬಿಯರಿಟ್ಜ್ನಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದರು. ಈ ವೇಳೆ ಟ್ರಂಪ್ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಈ ವಿಚಾರವನ್ನು ಮನವರಿಕೆ ಮಾಡಿದ್ದಾರೆ. ಅಲ್ಲದೆ ಸಣ್ಣಪುಟ್ಟ ಸಮಸ್ಯೆಗಳೊಂದಿಗೆ ದೊಡ್ಡ ಸಮಸ್ಯೆಗಳ ಪರಿಹಾರಕ್ಕೆ ಹೋರಾಡಬೇಕಾಗಿದೆ ಎಂದರು.