ಬೀಜಿಂಗ್, ಮೇ. 23 (DaijiworldNews/AA): ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಚೀನಾದಲ್ಲಿ ನಡೆದಿದೆ.

ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ 7:29 ಕ್ಕೆ ಈ ಅವಘಡ ನಡೆದಿದೆ. ಆ ವೇಳೆ ಒಟ್ಟು 242 ಕಾರ್ಮಿಕರು ನೆಲದಡಿಯಿದ್ದರು. ಅವರಲ್ಲಿ ಹೆಚ್ಚಿನವರನ್ನು ಶನಿವಾರ ಬೆಳಗ್ಗೆ ಮೇಲ್ಮೈಗೆ ತರಲಾಗಿದೆ. ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ನಾಪತ್ತೆಯಾದ ಒಂಬತ್ತು ಜನರಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಎಲ್ಲಾ ಇಲಾಖೆಗಳು ಈ ಅವಘಡದಿಂದ ಪಾಠ ಕಲಿಯಬೇಕು. ಕೆಲಸದ ಸ್ಥಳದ ಸುರಕ್ಷತೆಯ ಬಗ್ಗೆ ಜಾಗರೂಕರಾಗಿರಬೇಕು. ದುರಂತಗಳು ಸಂಭವಿಸದಂತೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಕರೆ ನೀಡಿದ್ದಾರೆ.