ಕೊಲಂಬೊ, ಜು. 06 (DaijiworldNews/AA): ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆಯಾದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ಶ್ರೀಲಂಕಾದ ಕೊಲಂಬೊದ ನೆಗೊಂಬೊ ಜೈಲಿನಲ್ಲಿ ನಡೆದಿದೆ.

ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳ ನಡುವೆ ಭಾನುವಾರವೇ ಈ ಗಲಾಟೆ ಆರಂಭವಾಗಿತ್ತು. ಕೈದಿಗಳ ನಡುವಿನ ಈ ಘರ್ಷಣೆಗೆ ನಿಖರವಾದ ಕಾರಣ ಏನೆಂಬುದು ತಿಳಿದುಬಂದಿಲ್ಲ. ಸದ್ಯ ಅಧಿಕಾರಿಗಳು ಜೈಲಿನ ಆವರಣವನ್ನು ಪರಿಶೀಲಿಸುತ್ತಿದ್ದು, ಮೃತಪಟ್ಟವರು ಮತ್ತು ಗಾಯಗೊಂಡವರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
ಜೈಲಿನ ಮುಖ್ಯ ದ್ವಾರದ ಹೊರಗೆ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಗಾಯಗೊಂಡ ಕೈದಿಗಳನ್ನು ಪೊಲೀಸ್ ಬಸ್ಗಳ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.