ಇಸ್ಲಾಮಾಬಾದ್, ಸೆ.12(Daijiworld News/SS): ಕಾಶ್ಮೀರ ವಿಚಾರದಲ್ಲಿ ಉಭಯ ದೇಶಗಳ ನಡುವೆ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯೊಂದೇ ದಾರಿ ಎಂದು ಪಾಕ್ ವಿದೇಶಾಂಗ ಸಚಿವ ಶಾಹ್ ಮೆಹ್ಮೂದ್ ಖುರೇಶಿ ಹೇಳಿದ್ದಾರೆ.
ಕಾಶ್ಮೀರ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಉಲ್ಭಣ ಪರಿಸ್ಥಿತಿ ಉಂಟಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಎರಡೂ ರಾಷ್ಟ್ರಗಳು ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಈ ವಿಚಾರದಲ್ಲಿ ನಾವು ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು.
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪಾಕ್ ವಿದೇಶಾಂಗ ಸಚಿವ ಶಾಹ್ ಮೆಹ್ಮೂದ್ ಖುರೇಶಿ ಅವರು, ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಭಾರತ - ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಮಾತುಕತೆ ಅಸಾಧ್ಯ. ಈ ವಿವಾದ ಇತ್ಯರ್ಥಕ್ಕೆ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯೊಂದೇ ದಾರಿ ಎಂದು ಹೇಳಿದ್ದಾರೆ.
ಕಾಶ್ಮೀರ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವಂತೆ ಪಾಕಿಸ್ತಾನ ಮಾಡಿರುವ ಮನವಿಯನ್ನು ಆಂಟೋನಿಯೊ ಗುಟೆರಸ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.