ನವದೆಹಲಿ, ಅ 24 (Daijiworld News/MSP): ಲಂಡನ್ನಲ್ಲಿರುವ ಪಾಕಿಸ್ಥಾನದ ಪರ ಸಂಘಟನೆಗಳು ಭಾರತದ ನಡೆಯನ್ನು ವಿರೋಧಿಸಿ, ಜಮ್ಮು ಮತ್ತು ಕಾಶ್ಮೀರ ದಲ್ಲಿ ಕೇಂದ್ರ ಸರಕಾರ 370ನೇ ವಿಧಿ ಹಿಂಪಡೆದಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ದೀಪಾವಳಿಯಂದು ಪ್ರತಿಭಟನೆ ಹಮ್ಮಿ ಕೊಳ್ಳಲಾಗಿದೆ.
ಈ ವಿಚಾರವಾಗಿ ಲಂಡನ್ ನಲ್ಲಿರುವ ಭಾರತೀಯರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು ಈ ಬಗ್ಗೆ ಬ್ರಿಟನ್ಗೆ ಭಾರತ ಆಕ್ಷೇಪ ವ್ಯಕ್ತಪಡಿಸಿದೆ.
ಅ. 27ರಂದು ಈ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಗಳಿಂದ ಭಾರತ ಮತ್ತು ಇಂಗ್ಲೆಂಡ್ ಸಂಬಂಧದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಈ ಪ್ರತಿಭಟನೆಗೆ ಭಾರತ ಆಕ್ಷೇಪ ವ್ಯಕ್ತಪಡಿಸಿದೆ. ಆದರೆ ಇನ್ನೊಂದೆಡೆ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್, ಪ್ರತಿಭಟನೆಗೆ ನಮ್ಮ ಬೆಂಬಲವಿಲ್ಲ ಇಲ್ಲಿ ಹಿಂಸೆ ಮತ್ತು ಪ್ರಚೋದನೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ಈ ಮುಂಚೆ ಪಾಕಿಸ್ಥಾನದ ಪರ ಸಂಘಟನೆಗಳು ನಡೆಸಿದ ಪ್ರತಿಭಟನೆಯ ಸಂದರ್ಭ ಭಾರತೀಯ ರಾಯಭಾರ ಕಚೇರಿಯ ಮೇಲೆ ಕಲ್ಲೆಸೆಯಲಾಗಿತ್ತು.