ಬೀಜಿಂಗ್, ಅ 30 (DaijiworldNews/SM): ಅರ್ಟಿಕಲ್ 370ನ್ನು ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ಕೇಂದ್ರ ಸರ್ಕಾರದ ಸರಿಯಲ್ಲ ಎಂದು ನೆರೆ ರಾಷ್ಟ್ರ ಚೀನಾ ಹೇಳಿದೆ. ಹಾಗೂ ಭಾರತ ಸರಕಾರದ ನಿರ್ಧಾರವನ್ನು ತೀವ್ರವಾಗಿ ಟಿಕಿಸಿದೆ. ಭಾರತ ಕೈಗೊಂಡಿರುವ ನಿರ್ಧಾರ ಕಾನೂನು ಬಾಹಿರ ಎಂದಿದೆ. ಆದರೆ, ಚೀನಾಕ್ಕೆ ಭಾರತ ತಿರುಗೇಟು ನೀಡಿದೆ.
ನೂತನ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿವೆ. ಭಾರತದ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆಯನ್ನು ಇತರೆ ದೇಶಗಳು ಗೌರವಿಸುತ್ತವೆ ಎಂಬ ನಿರೀಕ್ಷೆ ಇದೆ ಎಂದು ಭಾರತ ತಿರುಗೇಟು ನೀಡಿದೆ.
ಜಮ್ಮು ಮತ್ತು ಕಾಶ್ಮೀರ ವಿಭಜನೆ ಭಾರತದ ಆಂತರಿಕ ವಿಚಾರವಾಗಿದ್ದು, ಚೀನಾ ಸೇರಿದಂತೆ ಇತರ ದೇಶಗಳು ಭಾರತದ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುತ್ತವೆ ಎಂದು ನಾವು ನಿರೀಕ್ಷಿಸುವುದಿಲ್ಲ. ಇತರೆ ದೇಶಗಳು ನಮ್ಮ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುವುದಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.