ಟೆಹ್ರಾನ್, ಜ 7 (Daijiworld News/MB) : ಕಳೆದ ವಾರ ಅಮೆರಿಕದ ವೈಮಾನಿಕ ದಾಳಿಯಿಂದಾಗಿ ಮೃತಪಟ್ಟಿದ್ದ ಇರಾನ್ ಜನರಲ್ ಕಮಾಂಡರ್ ಖಾಸಿಂ ಸೋಲೆಮನಿ ಪಾರ್ಥಿವ ಶರೀರದ ಅಂತಿಮ ಯಾತ್ರೆ ಸಂದರ್ಭದಲ್ಲಿ 35ಕ್ಕೂ ಅಧಿಕ ಮಂದಿ ಕಾಲ್ತುಳಿತದಿಂದಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಂತಿಮ ಮೆರವಣೆಗೆಯ ಸಂದರ್ಭದಲ್ಲಿ ಸಾವಿರಾರು ಮಂದಿ ಸೇರಿದ್ದು, ನೂಕುನುಗ್ಗಲು ಸಂಭವಿಸಿದೆ. ಈ ಸಂದರ್ಭದಲ್ಲಿ ಹಲವಾರು ಮಂದಿ ಕಾಲ್ತುಳಿತದಿಂದ ಪ್ರಾಣ ಕಳೆದು ಕೊಂಡಿದ್ದಾರೆ ಹಾಗೂ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್ ತುರ್ತು ಸೇವೆಯ ಮುಖ್ಯಸ್ಥ ಪಿರೋಸ್ಸೈನ್ ಕೂಲಿವಂಡ್ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿರುವುದಾಗಿ ವರದಿಯಾಗಿದೆ.
ಸೋಮವಾರ ಈ ಮೆರವಣೆಗೆ ನಡೆದಿದ್ದು ಈ ಮೆರವಣಿಗೆಯಲ್ಲಿ ಒಂದು ಮಿಲಿಯನ್ಗೂ ಅಧಿಕ ಇರಾನ್ ಜನತೆ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿರುವುದು ದುರದೃಷ್ಟಕರ ಸಂಗತಿ ಎಂದು ಅವರು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.