ವಾಷಿಂಗ್ಟನ್, ಜ 15 (Daijiworld News/MSP): ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಶಾಸನಸಭೆಗೆ ತಡೆಯೊಡ್ಡಿದ ಆರೋಪ ಹೊತ್ತಿರುವ ಅಮೆರಿಕ ಆಧ್ಯಕ್ಷ ಡೊನಾಲ್ಡ್ ಟ್ರಂಪ್ ಕಳೆದ ತಿಂಗಳು ಅಮೆರಿಕ ಹೌಸ್ ಆಫ್ ರೆಪ್ರಸೆಂಟೇಟಿವ್ಸ್ (ಕೆಳಮನೆ)ನಲ್ಲಿ ವಾಗ್ಧಂಡನೆಗೆ ಗುರಿಯಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಜ. 21ರಿಂದ ಸೆನೆಟ್ ನಲ್ಲಿ ಮೇಲ್ಮನೆಯಲ್ಲಿ ವಾಗ್ಧಂಡನೆ ವಿಧಿಸಲಾಗುತ್ತದೆ.
ಸೆನೆಟ್ ನಲ್ಲಿ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕ್ ಪಕ್ಷ ಬಹುಮತ ಹೊಂದಿರುವ ಕಾರಣದಿಂದ ವಾಗ್ದಂಡನೆ ಪ್ರಕ್ರಿಯೆಗೆ ಸೋಲಾಗುವ ಸಾಧ್ಯತೆಗಳು ಹೆಚ್ಚಾಗಿವೆ.
2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಎದುರಾಳಿಗಿ ಸ್ಪರ್ಧಿಸಬಹುದಾದ ಜೋ ಬಿಡೆನ್ ಅವರ ವ್ಯಕ್ತಿತ್ವಕ್ಕೆ ಚ್ಯುತಿ ತರುವ ಮಾಹಿತಿಯನ್ನು ಬಹಿರಂಗಪಡಿಸುವಂತೆ ಟ್ರಂಪ್ ಅವರು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಮೇಲೆ ಒತ್ತರ ಹೇರುತ್ತಿದ್ದು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವ ಪ್ರಸ್ತಾವನೆಯ ಬಗ್ಗೆ ಚರ್ಚೆ ಆಗಲಿದೆ. ವಾಗ್ದಂಡನೆ ಪ್ರಕ್ರಿಯೆಗೆ ಜಯ ಸಿಗುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ.