ಪಾಕಿಸ್ತಾನ, ಫೆ 29 (Daijiworld News/MB) : ಬಸ್ಸು ಮತ್ತು ಪಾಕಿಸ್ತಾನ ಎಕ್ಸ್ಪ್ರೆಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕನಿಷ್ಠ 20 ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಇಲ್ಲಿನ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.
ರೈಲು ಬರುತ್ತಿರುವುದನ್ನು ಗಮನಿಸದ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ರೈಲು ಅಧಿಕಾರಿಗಳು, ಪೊಲೀಸರು ಆಗಮಿಸಿದ್ದು ತನಿಖೆ ಮುಂದುವರಿದಿದೆ ರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇದು ಅತ್ಯಂತ ಭಯಾನಂಕವಾದ ಅಪಘಾತ ಬಸ್ ಮೂರು ತುಂಡಾಗಿದೆ. ಕನಿಷ್ಠ ೨೦ ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.