ಲಂಡನ್, ಮಾ.25 (DaijiworldNews/PY) : ಬ್ರಿಟನ್ ಅರಸೊತ್ತಿಗೆ ಉತ್ತರಾಧಿಕಾರಿ, ಬ್ರಿಟನ್ ರಾಜಕುಮಾರ ಚಾರ್ಲ್ಸ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಅರಮನೆ ಮೂಲಗಳು ತಿಳಿಸಿವೆ.
ಚಾರ್ಲ್ಸ್ (71) ಅವರು ಬ್ರಿಟನ್ ಮಹಾರಾಣಿ ಎಲಿಜೆಬೆತ್ ಅವರ ಮೊದಲ ಮಗ.
ಪ್ರಿನ್ಸ್ ಆಫ್ ವೇಲ್ಸ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಕೊರೊನಾ ವೈರಸ್ ರೋಗದ ಲಕ್ಷಣಗಳು ಕಾಣಿಸಿಕೊಂಡಿವೆ. ಅವರ ಆರೋಗ್ಯ ಉತ್ತಮವಾಗಿದೆ. ಅವರು ಕಳೆದ ಕೆಲ ದಿನಗಳಿಂದ ಮಲನೆಯಿಂದಲೇ ಕೆಲಸ ಮಾಡುತ್ತಿದ್ದರು ಎಂಬುದಾಗಿ ಬ್ರಿಟನ್ ಅರಮನೆಯ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಪತ್ನಿ ಕ್ಯಾಮಿಲ್ಲಾ ಅವರನ್ನು ತಪಾಸಣೆಗೆ ಒಳಪಡಿಸಲಾಗಿದೆ.
ಅವರ ರಿಪೋರ್ಟ್ ಕೊರೊನಾ ವೈರಸ್ ನೆಗೆಟಿವ್ ಬಂದಿದೆ. ರಾಜಕುಮಾರ ಪ್ರಿನ್ಸ್ ಅವರು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರನ್ನು ಭೇಟಿಯಾಗಿದ್ದರು. ಅವರಿಗೆ ಯಾರಿಂದ ಸೋಂಕು ತಗುಲಿದೆ ಎನ್ನುವ ಬಗ್ಗೆ ಖಚಿತ ಮಾಹಿತಿ ಲಭ್ಯವಿಲ್ಲ ಎಂದು ಅರಮನೆ ಮೂಲಗಳು ತಿಳಿಸಿವೆ.