ಲಂಡನ್, ಮಾ.27 (DaijiworldNews/PY) : ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ವಿಚಾರವಾಗಿ ಶುಕ್ರವಾರ ವಿಡಿಯೋ ಒಂದನ್ನು ಟ್ವೀಟರ್ನಲ್ಲಿ ಪೋಸ್ಟ್ ಮಾಡಿರುವ ಅವರು, ನನಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ. ಸಣ್ಣ ಪ್ರಮಾಣದಲ್ಲಿ ಲಕ್ಷಣಗಳು ಕಾಣಿಸಿಕೊಂಡಿದ್ದ ಕಾರಣ ವೈದ್ಯರು ತಪಾಸಣೆ ಮಾಡಿದ್ದಾರೆ. ಇದೀಗ ಸೋಂಕು ಇರುವುದು ದೃಢಪಟ್ಟಿದೆ. ನಾನು ಸೆಲ್ಫ್ ಐಸೋಲೇಷನ್ ಮಾಡಿಕೊಳ್ಳಲಿದ್ದು, ಐಸೋಲೇಷನ್ ನಿಂದ ತಮ್ಮ ಕರ್ತವ್ಯಗಳನ್ನು ಮುಂದುವರಿಸುತ್ತಾರೆ ಎಂದು ತಿಳಿಸಿದ್ದಾರೆ.
ಸೋಂಕು ತಗುಲಿದ್ದರೂ ಬ್ರಿಟನ್ ಪ್ರಧಾನಿ ಅವರು ನಾನೇ ಕರ್ತವ್ಯ ನಿಭಾಯಿಸಲಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ, ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ದೇಶವಾಸಿಗಳನ್ನು ಮನೆಯಲ್ಲಿಯೇ ಇರಿ, ಆರೋಗ್ಯವಾಗಿರಿ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇದುವರೆಗೆ ಬ್ರಿಟನ್ನಲ್ಲಿ 10 ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. 528 ಜನರು ಕೊರೊನಾಗೆ ಮೃತಪಟ್ಟಿದ್ದಾರೆ. 137 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.