ಲಂಡನ್, ಏ 07(Daijiworld News/MSP): ಕೊರೊನಾ ಜ್ವರ ತೀವ್ರವಾಗಿ ಬಾಧಿಸಿ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ತುರ್ತು ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಧಾನಿ ಬೋರಿಸ್ ಜಾನ್ಸನ್ ಅವರಲ್ಲಿ ಕೋವಿಡ್ 19 ವೈರಸ್ ದೃಢಪಟ್ಟಿದ್ದರಿಂದ ಸೆಲ್ಫ್ ಕ್ವಾರಂಟೈನ್ ಗೆ ಅವರು ಒಳಗಾಗಿದ್ದರು, ಆದರೆ ಭಾನುವಾರ ಸಂಜೆ ವಿಪರೀತ ಜ್ವರದ ಕಾರಣ ಲಂಡನ್ ನ ಸೇಂಟ್ ಥಾಮಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಐಸಿಯುಗೆ ಅವರನ್ನು ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ನಡುವೆ ಬ್ರಿ"ಟೀಷ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರು, ಶೀಘ್ರಗತಿಯಲ್ಲಿ ಗುಣಮುಖರಾಗಲಿ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಹಾರೈಸಿದ್ದಾರೆ.
ಬೋರಿಸ್ ಅವರ ಗರ್ಭಿಣಿ ಪ್ರೇಯಸಿ ಕ್ಯಾರಿ ಸೈಮಂಡ್ಸ್ ಅವರು ಕೊರೊನಾದಿಂದ ಬಳಲುತ್ತಿದ್ದು, ಇದರ ಪರಿಣಾಮ ಬೋರಿಸ್ ಜಾನ್ಸನ್ ಕೊರೊನಾ ತಗುಲಿತ್ತು. ಆದರೆ ಕ್ಯಾರಿ ಸೈಮಂಡ್ಸ್ ಗುಣಮುಖರಾಗಿದ್ದು ವಿಶ್ರಾಂತಿಯಲ್ಲಿದ್ದಾರೆ.
'ಬೋರಿಸ್ ಅವರನ್ನು ಆಸ್ಪತ್ರೆಗೆ ಸೇರ್ಪಡೆ ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಮಧ್ಯಾಹ್ನ ಅವರ ಆರೋಗ್ಯ ತೀವ್ರ ಗಂಭೀರವಾಗಿತ್ತು. ಹೀಗಾಗಿ ಆಸ್ಪತ್ರೆ ವೈದ್ಯರು ವಿಶೇಷ ಚಿಕಿತ್ಸೆ ನೀಡುತ್ತಿದ್ದಾರೆ,' ಎಂದು ಪಿಎಂ ಕಚೇರಿ ತಿಳಿಸಿದೆ.