ವಾಷಿಂಗ್ಟನ್, ಜೂ. 04 (Daijiworld News/MB) : ಜನಾಂಗೀಯ ದ್ವೇಷದ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಪ್ರತಿಭಟನಕಾರರು ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೊರಗಿನ ಮಹಾತ್ಮ ಗಾಂಧಿ ಪ್ರತಿಮೆಯನ್ನು ವಿರೂಪಗೊಳಿಸಿದ್ದು ಅದಕ್ಕೆ ಅಮೆರಿಕಾ ಕ್ಷಮೆ ಕೋರಿದೆ.
ಗಾಂಧಿ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಖೇದಕರ, ಮಹಾತ್ಮ ಗಾಂಧಿಯನ್ನು ಗೌರವಿಸುತ್ತೇವೆ. ಅವರ ತತ್ವಾದರ್ಶಗಳು ವಿಶ್ವಕ್ಕೆ ಪ್ರಸ್ತುತವಾಗಿದ್ದು ಅವರ ಪ್ರತಿಮೆ ಅಪವಿತ್ರಗೊಳಸಿದ್ದಕ್ಕೆ ಕ್ಷಮೆ ಇರಲಿ ಎಂದು ಅಮೆರಿಕ ಭಾರತೀಯ ರಾಯಭಾರಿ ಕೆನ್ ಜಸ್ಟರ್ ಹೇಳಿದ್ದಾರೆ.
ಈ ಕುರಿತಾಗಿ ಅಮೆರಿಕ ಪೊಲೀಸರು ಈಗಾಗಲೇ ತನಿಖೆ ಆರಂಭ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.