ಇಸ್ಲಾಮಾಬಾದ್ ಜೂ 15 (Daijiworld News/MSP): ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಕೆಲಸ ಮಾಡುತ್ತಿದ್ದ ಇಬ್ಬರು ಭಾರತೀಯ ಅಧಿಕಾರಿಗಳು ನಾಪತ್ತೆಯಾಗಿದ್ದಾರೆ ಎಂದು ಸೋಮವಾರ ವರದಿಯಾಗಿದೆ.
ಇಂದು ಬೆಳಗ್ಗೆ 8 ಗಂಟೆಯಿಂದ, ಕರ್ತವ್ಯದಲ್ಲಿರುವಾಗಿನಿಂದಲೇ ಅವರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ವಿಚಾರವನ್ನು ಪಾಕಿಸ್ತಾನದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿರುವುದಾಗಿಯೂ ಗೊತ್ತಾಗಿದೆ. ಈ ಕುರಿತು ಪಾಕಿಸ್ತಾನದ ವಿದೇಶಾಂಗ ಸಚಿವಾಲಯಕ್ಕೂ ಮಾಹಿತಿ ನೀಡಲಾಗಿದೆ. ಮಾತ್ರವಲ್ಲದೆ ಭಾರತದ ಅಧಿಕಾರಿಗಳ ಪತ್ತೆಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನವನ್ನು ಭಾರತ
ಪಾಕಿಸ್ತಾನದಲ್ಲಿರುವ ಹಲವು ಭಾರತೀಯ ರಾಯಭಾರಿಗಳ ಮೇಲೆ ನಿಗಾ ಇರಿಸಲಾಗಿದ್ದು, ಈ ವಿಪರೀತ ಕಣ್ಗಾವಲಿಗೆ ಭಾರತ ವಿರೋಧ ವ್ಯಕ್ತಪಡಿಸಿತ್ತು ಅಲ್ಲದೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪಾಕಿಸ್ತಾನದ ಏಜೆನ್ಸಿಗಳು ನಿರಂತರವಾಗಿ ಕಿರುಕುಳ ನೀಡುತ್ತಿರುವುದನ್ನು ವಿರೋಧಿಸಿ ಪಾಕಿಸ್ತಾನದ ಭಾರತೀಯ ಹೈಕಮಿಷನ್ ಇಸ್ಲಾಮಾಬಾದ್ನ ವಿದೇಶಾಂಗ ಸಚಿವಾಲಯಕ್ಕೆ ಮಾರ್ಚ್ನಲ್ಲಿ ಪ್ರತಿಭಟನಾ ಟಿಪ್ಪಣಿಯನ್ನು ಕಳುಹಿಸಿತ್ತು.