ವಾಷಿಂಗ್ಟನ್, ಆ. 23(DaijiworldNews/HR): ವಿಶ್ವದಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚಾಗುತ್ತಿದ್ದು, ಇದೀಗ ವಿಶ್ವ ಆರೋಗ್ಯ ಸಂಸ್ಥೆ ಹೊಸದೊಂದು ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, 12 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿದೆ.
ಕೊರೊನಾ ವೈರಸ್ ಭೀತಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ವಿಶ್ವ ಆರೋಗ್ಯ ಸಂಸ್ಥೆ ಕೈಗೊಂಡಿದ್ದು, ಇದೀಗ 12 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶವನ್ನು ಹೊರಡಿಸಿದೆ.
ಅಮೆರಿಕಾದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಇದುವರೆಗೂ ಅಮೆರಿಕಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 58,41,428 ಕ್ಕೆ ಏರಿಕೆಯಾಗಿ, 18,01,74 ಮಂದಿ ಸಾವನ್ನಪ್ಪಿದ್ದಾರೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ ಸೋಂಕಿತರ ಸಂಖ್ಯೆ 35,82,698 ಕ್ಕೆ ಏರಿಕೆಯಾಗಿದೆ. ಭಾರತ 3 ನೇ ಸ್ಥಾನದಲ್ಲಿದ್ದು, ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ ಎಂದು ತಿಳಿದು ಬಂದಿದೆ.