ವಾಷಿಂಗ್ಟನ್, ಸೆ. 09 (DaijiworldNews/MB) : ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರು ನಾಮ ನಿರ್ದೇಶನಗೊಂಡಿದೆ ಎಂದು ವರದಿಯಾಗಿದೆ.
2021ರ ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಅವರು ನಾಮ ನಿರ್ದೇಶನಗೊಂಡಿದ್ದು ನಾರ್ವೆ ದೇಶದ ಸಂಸದ ಕ್ರಿಶ್ಚಿಯನ್ ಟೈಬ್ಲಿಂಗ್ ಜಿಡೆ ಅವರು ನಾಮ ನಿರ್ದೇಶನ ಮಾಡಿ, ''ಜಾಗತಿಕವಾಗಿ ನಡೆಯಲಿದ್ದ ಸಂಘರ್ಷಗಳನ್ನು ತಡೆಯುವಲ್ಲಿ ಟ್ರಂಪ್ ಅವರು ಮಹತ್ತರವಾದ ಕೊಡುಗೆ ನೀಡಿದ್ದಾರೆ. ಈ ಕಾರಣದಿಂದಾಗಿ ಈ ಕಾರಣದಿಂದಾಗಿ ಅವರ ಹೆಸರನ್ನು ನೊಬೆಲ್ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲಾಗಿದೆ'' ಎಂದು ಜಿಡೆ ಅವರು ತಿಳಿಸಿರುವುದಾಗಿ ವರದಿಯಾಗಿದೆ.