ದುಬೈ, ಸೆ.18 (DaijiworldNews/HR): ದುಬೈಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವೊಂದರಲ್ಲಿ, ಇಬ್ಬರು ಪ್ರಯಾಣಿಕರಲ್ಲಿ ಕೊರೊನಾ ಪಾಸಿಟಿವ್ ಆಗಿರುವುದು ಕಂಡುಬಂದಿದೆ. ಇದರ ಬೆನ್ನಲ್ಲೇ ಅಧಿಕಾರಿಗಳು ಸೆಪ್ಟೆಂಬರ್ 18 ರಿಂದ ಅಕ್ಟೋಬರ್ 3 ರವರೆಗೆ ಭಾರತದಿಂದ ದುಬೈಗೆ ವಿಮಾನಗಳನ್ನು 15 ದಿನಗಳವರೆಗೆ ಸ್ಥಗಿತಗೊಳಿಸಿದ್ದಾರೆ.
ಕೊರೊನಾ ವೈರಸ್ ಕಾರಣದಿಂದಾಗಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ರದ್ದಗೊಳಿಸಲಾಗಿದ್ದು, ಇದರಿಂದಾಗಿ ವಿದೇಶಗಳಲ್ಲಿ ಸಿಲುಕಿಕೊಂಡ ಭಾರತೀಯರನ್ನು ಮರಳಿ ಕರೆತರುವ ಉದ್ದೇಶದಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಕಾರ್ಯಾಚರಣೆ ಪ್ರಾರಂಭಿಸಿತ್ತು.
ಯುಎಇ ಮತ್ತು ಭಾರತ ನಡುವಿನ ಒಪ್ಪಂದದ ಪ್ರಕಾರ ಪ್ರಯಾಣಿಕರು ಕೊರೊನಾ ಪರೀಕ್ಷೆ ಮಾಡಿಸಿ, ಕಟ್ಟುನಿಟ್ಟಾದ ನಿಯಮಗಳು ಪಾಲಿಸಬೇಕಾಗಿತ್ತು.