ಬೀಜಿಂಗ್, ಸೆ. 27 (DaijiworldNews/HR): ಕಲ್ಲಿದ್ದಲು ಗಣಿಗಾರಿಕೆ ವೇಳೆ ಸಂಭವಿಸಿದ ದುರಂತದಲ್ಲಿ 16 ಕಾರ್ಮಿಕರು ಪ್ರಾಣ ಬಿಟ್ಟಿರುವ ಘಟನೆ ನೈಋತ್ಯ ಚೀನಾದಲ್ಲಿ ನಡೆದಿದೆ.
ಘಟನೆಯಲ್ಲಿ ಒಬ್ಬ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಇಂದು ಮುಂಜಾನೆ ಒಂದು ಕನ್ವೇಯರ್ ಬೆಲ್ಟ್ ಬೆಂಕಿಗೆ ಆಹುತಿಯಾಯಿತು. ಇದು ಅಪಾಯಕಾರಿ ಮಟ್ಟದ ಇಂಗಾಲದ ಮಾನಾಕ್ಸೈಡ್ ಅನ್ನು ಉತ್ಪಾದಿಸಿತು. ಬದುಕುಳಿದವರ ಪ್ರಾಣ ಉಳಿಸಲು ವೈದ್ಯರು ಶ್ರಮಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಘಟನೆಗೆ ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ. ಚೀನಾದಲ್ಲಿ ಕಲ್ಲಿದ್ದಲು ಗಣಿಗಾರಿಕೆ ನಿಕ್ಷೇಪಗಳಲ್ಲಿ ದುರಂತಗಳು ಸಂಭವಿಸುತ್ತಿರುವುದು ಇತ್ತೀಚಿಗೆ ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದಿದ್ದಾಗ ಮತ್ತು ಸರ್ಕಾರದ ನಿಯಮಗಳನ್ನು ಪಾಲಿಸದ ಸಂದರ್ಭದಲ್ಲಿ ಇಂಥ ದುರಂತಗಳು ಸಂಭವಿಸುತ್ತವೆ. ಕಳೆದ ಡಿಸೆಂಬರ್ ತಿಂಗಳಿನಲ್ಲಿ ನೈಋತ್ಯ ವಿಭಾಗದ ಕ್ವಿಜಾವೋ ಪ್ರದೇಶದಲ್ಲಿ ಸಂಭವಿಸಿದ ಕಲ್ಲಿದ್ದಲು ಅನಿಲ ಸ್ಫೋಟದಲ್ಲಿ ಕನಿಷ್ಠ 14 ಮಂದಿ ಪ್ರಾಣ ಬಿಟ್ಟಿದ್ದರು.