ಸಿಂಧ್, ಅ.01 (DaijiworldNews/HR): ಪಾಕಿಸ್ತಾನದ ಥರ್ಪಾರ್ಕರ್ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಗೆ ಅತ್ಯಾಚಾರವೆಸಗಿದ ಕಾಮುಕರು ಬ್ಲಾಕ್ ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಹಿಂದೂ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
2019ರ ಜುಲೈ ತಿಂಗಳಿನಲ್ಲಿ 17 ವರ್ಷದ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರ ವೆಸಗಿದ ಆರೆೋಪಿಗಳು ಪದೇ ಪದೇ ಬ್ಲಾಕ್ ಮೇಲ್ ಮಾಡಿದ್ದಾರೆ. ಅತ್ಯಾಚಾರಿಗಳು ಪ್ರಭಾವಿ ವ್ಯಕ್ತಿಗಳಾಗಿದ್ದಾರೆಂದು ಹೇಳಲಾಗುತ್ತಿದ್ದು, ಈಗಾಗಲೇ ಪ್ರಕರಣ ಸಂಬಂಧ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.
ಇನ್ನು ಅತ್ಯಾಚಾರದ ವಿಡಿಯೋ ಮಾಡಿಕೊಂಡಿದ್ದ ಆರೋಪಿಗಳು ಆಕೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಯುವತಿ ಬಾವಿಯೊಂದಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ವರದಿಗಳು ತಿಳಿಸಿವೆ.
ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಅಬ್ದುಲ್ಲಾ ಅಹ್ಮೆದ್ಯಾರ್, ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.