ಇಸ್ಲಾಮಾಬಾದ್,ಅ.07 (DaijiworldNews/HR): ಕುಲಭೂಷಣ್ ಜಾಧವ್(50) ಅವರ ಮರಣದಂಡನೆ ತೀರ್ಪು ಮರು ಪರಿಶೀಲನೆಗಾಗಿ ವಕೀಲರನ್ನು ನೇಮಿಸುವಲ್ಲಿ ಭಾರತ ವಿಫಲವಾಗಿದೆ ಎಂದು ಪಾಕಿಸ್ತಾನ ಸರ್ಕಾರ ಅಲ್ಲಿನ ನ್ಯಾಯಾಲಯಕ್ಕೆ ತಿಳಿಸಿದೆ.
2017 ರ ಏಪ್ರಿಲ್ನಲ್ಲಿ ನಿವೃತ್ತ ಭಾರತೀಯ ನೌಕಾಪಡೆಯ ಅಧಿಕಾರಿ ಜಾಧವ್ಗೆ ಗೂಢ ಚರ್ಯೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು.
ಇನ್ನು ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ನಂತರ ಜಾಧವ್ ಗೆ ಪಾಕಿಸ್ತಾನ ಮಿಲಿಟರಿ ಕೋರ್ಟ್ ವಿಧಿಸಿರುವ ಮರಣ ದಂಡನೆ ಶಿಕ್ಷೆ ಜಾರಿಗೊಳಿಸುವುದು ಕಷ್ಟಕರವಾಗಿ ಪರಿಣಮಿಸಿದ್ದು, ಅವರಿಗೆ ವಿಧಿಸಿರುವ ಶಿಕ್ಷೆ ಮರು ಪರಿಶೀಲಿಸುತ್ತಿರುವ ಇಸ್ಲಾಮಾಬಾದ್ ಹೈಕೋರ್ಟ್, ಸೂಕ್ತ ವಕೀಲರ ನೇಮಕಕ್ಕೆ ಅವಕಾಶ ನೀಡುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ.
ಇನ್ನು ನವೆಂಬರ್ 9ಕ್ಕೆ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.